ಕರ್ನಾಟಕ

karnataka

ETV Bharat / bharat

ಹುತಾತ್ಮ ಯೋಧನ ಕುಟುಂಬಸ್ಥರಿಗೆ ಪ್ರಿಯಾಂಕಾ ಸಾಂತ್ವನ.. ಮೋದಿ ವಿರುದ್ಧದ ಸ್ಪರ್ಧೆ ಬಗ್ಗೆ ಹೇಳಿದ್ದೇನು? - ವಾರಣಾಸಿಯಲ್ಲಿ ಮೋದಿ

ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್​ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಕಾಂಗ್ರೆಸ್ ಇದನ್ನು ತಳ್ಳಿಹಾಕಿತ್ತು. ಇದೀಗ ಪ್ರಿಯಾಂಕಾ ಖುದ್ದಾಗಿ ಪ್ರತಿಕ್ರಿಯೆ ನೀಡಿ, ಸ್ಪರ್ಧಿಸಲ್ಲ ಎಂದಿದ್ದಾರೆ.

ಪ್ರಿಯಾಂಕಾ ಗಾಂಧಿ

By

Published : Apr 21, 2019, 5:57 PM IST

ವಯನಾಡು: ಸಹೋದರ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್‌ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಶನಿವಾರವಷ್ಟೇ ಬೃಹತ್ ರೋಡ್ ಶೋ ಹಾಗೂ ಸಮಾವೇಶ ನಡೆಸಿದ ಪ್ರಿಯಾಂಕಾ ಇಂದು ಕ್ಷೇತ್ರದಲ್ಲಿ ಮತಬೇಟೆ ನಡೆಸಿದರು. ಇದೇ ವೇಳೆ ಫೆ.14 ರಂದು ನಡೆದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವಯನಾಡಿನ ಯೋಧ ವಿವಿ ವಸಂತ್​ಕುಮಾರ್ ಅವರ ಕುಟುಂಬಸ್ಥರನ್ನು ಪ್ರಿಯಾಂಕಾ ಭೇಟಿಯಾಗಿ ಧೈರ್ಯ ತುಂಬಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕಾ, ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸುವ ಊಹಾಪೋಹದ ಪ್ರಶ್ನೆಗೆ ಉತ್ತರಿಸಿದರು.ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಸ್ಪರ್ಧಿಸುವಂತೆ ಸೂಚಿಸಿದ್ದರೆ, ಖಂಡಿತವಾಗಿಯೂ ಸಂತೋಷದಿಂದಲೇ ಕಣಕ್ಕೆ ಇಳಿಯುತ್ತಿದ್ದೆ ಎಂದು ಮಾಧ್ಯಮಗಳಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್​ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಕಾಂಗ್ರೆಸ್ ಇದನ್ನು ತಳ್ಳಿಹಾಕಿತ್ತು. ಇದೀಗ ಪ್ರಿಯಾಂಕಾ ಖುದ್ದಾಗಿ ಪ್ರತಿಕ್ರಿಯೆ ನೀಡಿ, ಸ್ಪರ್ಧಿಸಲ್ಲ ಎಂದಿದ್ದಾರೆ.

ABOUT THE AUTHOR

...view details