ಶ್ರೀನಗರ(ಜಮ್ಮು-ಕಾಶ್ಮೀರ): ಇಲ್ಲಿನ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಅವರ ಮೇಲೆ ಗಂಭೀರ ಆರೋಪ ಕೇಳಿ ಮಾಡಲಾಗಿದ್ದು, ಅಪಾರ ಪ್ರಮಾಣದ ಭೂಮಿ ಹೊಂದಿದ್ದಾರೆಂದು ಜಮ್ಮು-ಕಾಶ್ಮೀರದ ಇನ್ಸ್ಪೆಕ್ಟರ್ ಜನರಲ್ ಬಸಂತ್ ರಾಥ್ ಆರೋಪ ಮಾಡಿದ್ದಾರೆ.
ಜಮ್ಮು-ಕಾಶ್ಮೀರ ಡಿಜಿಪಿ ಮೇಲೆ ಗಂಭೀರ ಆರೋಪ ಮಾಡಿದ IPS ಅಧಿಕಾರಿ! - ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್
ಜಮ್ಮು-ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಮೇಲೆ ಐಪಿಎಸ್ ಅಧಿಕಾರಿವೋರ್ವರು ಗಂಭೀರ ಆರೋಪ ಮಾಡಿದ್ದಾರೆ.
2000 ಬ್ಯಾಚ್ನ ಐಪಿಎಸ್ ಅಧಿಕಾರಿ ಬಸಂತ್ ರಾಥ್ ಈ ಆರೋಪ ಮಾಡಿದ್ದು, ಸೆರೊರೆ ಡೆಂಟಲ್ ಕಾಲೇಜ್ ಬಳಿ 50 ಎಕರೆ ಭೂಮಿ ಹೊಂದಿದ್ದೀರಿ, ಇದು ನಿಮ್ಮ ಹೆಸರಿನಲ್ಲಿ ನೊಂದಾಯಿಸಲ್ಪಟ್ಟಿದೆಯೇ? ಎಂದು ಟ್ವೀಟ್ ಮಾಡಿದ್ದಾರೆ.
ಟ್ವೀಟ್ನಲ್ಲಿ ಮಾಡಿರುವ ಆರೋಪಕ್ಕೆ ದಿಲ್ಬಾಗ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ನಾನು ಅವರಿಗೆ ಸವಾಲು ಹಾಕುತ್ತೇನೆ. ನನ್ನ ಅಥವಾ ನನ್ನ ಕುಟುಂಬದ ಹಾಗೂ ನನ್ನ ಸಂಬಂಧಿಕರ ಹೆಸರಿನಲ್ಲಿ ಒಂದು ಇಂಚು ಭೂಮಿ ಅಥವಾ ಆಸ್ತಿ ಇದ್ದರೆ ಸಾಬೀತು ಮಾಡಿ ಎಂದಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಐಜಿಪಿ ವಿಜಯ್ ಕುಮಾರ್, ನಿಮ್ಮ ಬಳಿ ಸೂಕ್ತ ದಾಖಲೆಗಳಿದ್ದರೆ ಸಾಬೀತುಪಡಿಸಿ. ಅದನ್ನ ಬಿಟ್ಟು ಈ ರೀತಿಯಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.