ಕರ್ನಾಟಕ

karnataka

ETV Bharat / bharat

ಎಚ್ಚರಿಕೆ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ!

ಗೋವಾ, ಕರ್ನಾಟಕ ಹಾಗೂ ಒಡಿಶಾ ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಭಾರಿ ಮಳೆ

By

Published : Aug 7, 2019, 1:31 PM IST

ನವದೆಹಲಿ:ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಕೆಲ ದಿನಗಳ ಕಾಲ ಇದೇ ರೀತಿ ಮುಂದುವರೆಯಲಿದೆ ಎಂದುಭಾರತೀಯ ಹವಾಮಾನ ಇಲಾಖೆಎಚ್ಚರಿಕೆ ನೀಡಿದೆ.

ಗೋವಾ, ಕರ್ನಾಟಕ ಹಾಗೂ ಒಡಿಶಾ ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಛತ್ತೀಸ್​ಘಡ, ಮಧ್ಯಪ್ರದೇಶ, ಮಹಾರಾಷ್ಟ್ರ, ವಿದರ್ಭ, ತೆಲಂಗಾಣ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಅರಬ್ಬಿ ಸಮುದ್ರ ಭಾಗದಲ್ಲಿ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ತೀರ ಪ್ರದೇಶದಲ್ಲಿ ಜನತೆ ಹೆಚ್ಚಿನ ಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ. ಜೊತೆಗೆ ಮೀನುಗಾರರು ಸಮುದ್ರಕ್ಕಿಳಿಯಂತೆ ಹವಾಮಾನ ಇಲಾಖೆ ಹೇಳಿದೆ.

ABOUT THE AUTHOR

...view details