ನವದೆಹಲಿ: ಒಡಿಶಾ ಮತ್ತು ತೆಲಂಗಾಣದಲ್ಲಿ ಭಾನುವಾರ ಭಾರಿ ಮಳೆ ಆಗುತ್ತಿದ್ದು, ನಾಲ್ಕು ಮಂದಿ ಮೃತಪಟ್ಟಿರುವ ವರದಿ ಆಗಿದೆ. ಭಾರಿ ಮಳೆ ಹಿನ್ನೆಲೆ ಮಹಾರಾಷ್ಟ್ರದ ಎರಡು ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಭಾರತದ ರಾಜಸ್ಥಾನ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳು ಈಗಾಗಲೇ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತತ್ತರಿಸಿ ಹೋಗಿವೆ.
ಆದಾಗ್ಯೂ, ಆರ್ದ್ರತೆಯ ಮಟ್ಟವು ಶೇ 91ರಷ್ಟು ಹೆಚ್ಚಾಗಿದೆ ಮತ್ತು ಗರಿಷ್ಠ ತಾಪಮಾನವು 36.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಇದು ಸಾಮಾನ್ಯಕ್ಕಿಂತ ಮೂರು ಪಟ್ಟು ಅಧಿಕವಾಗಿದೆ. ಹವಾಮಾನ ತಜ್ಞರು ಮುಂದಿನ ಎರಡು ದಿನಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂಬ ಮುನ್ಸೂಚನೆ ನೀಡಿದ್ದಾರೆ.
ಅಸ್ಸೋಂನಲ್ಲಿ ಪ್ರವಾಹ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಿಸಿದರೆ, ಬಿಹಾರ ಪ್ರವಾಹದಲ್ಲೂ ಮತ್ತಷ್ಟು ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ ಬಿಹಾರದ ಪ್ರವಾಹದಿಂದ ಪೀಡಿತರ ಸಂಖ್ಯೆ ಸುಮಾರು 12,500 ರಷ್ಟು ಏರಿಕೆಯಾಗಿದ್ದು, ಒಟ್ಟು 16 ಜಿಲ್ಲೆಗಳಲ್ಲಿ ಪೀಡಿತರ ಸಂಖ್ಯೆ 81,44,356ಕ್ಕೆ ತಲುಪಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.