ಕರ್ನಾಟಕ

karnataka

ETV Bharat / bharat

ರಾಜ್ಯದ ವಿವಿಧೆಡೆ ಮಳೆಯಾರ್ಭಟ: ರೆಡ್​, ಯೆಲ್ಲೋ ಅಲರ್ಟ್ ಘೋಷಣೆ​​ - ಹವಾಮಾನ ಇಲಾಖೆ

ಉತ್ತರ ಒಡಿಶಾ - ಪಶ್ಚಿಮ ಬಂಗಾಳ ಕರಾವಳಿಯ ವಾಯುವ್ಯ ಕೊಲ್ಲಿಯಲ್ಲಿ ಉಂಟಾದ ಕಡಿಮೆ ಒತ್ತಡದಿಂದಾಗಿ ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲೂ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್​ ಮತ್ತು ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ರಾಜ್ಯದ ವಿವಿಧೆಡೆ ಮಳೆಯಾರ್ಭಟ
ರಾಜ್ಯದ ವಿವಿಧೆಡೆ ಮಳೆಯಾರ್ಭಟ

By

Published : Aug 14, 2020, 7:46 AM IST

ಬೆಂಗಳೂರು/ ನವದೆಹಲಿ:ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಒಳನಾಡುಗಳಲ್ಲಿ ರೆಡ್​ ಹಾಗೂ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಉತ್ತರ ಒಡಿಶಾ - ಪಶ್ಚಿಮ ಬಂಗಾಳ ಕರಾವಳಿಯ ವಾಯುವ್ಯ ಕೊಲ್ಲಿಯಲ್ಲಿ ರೂಪುಗೊಂಡ ಕಡಿಮೆ ಒತ್ತಡದಿಂದಾಗಿ ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮುಂಬೈ, ಥಾಣೆ, ಪಾಲ್ಘರ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಯಗಡ್, ರತ್ನಗಿರಿ ಮತ್ತು ಸಿಂಧುದುರ್ಗ್‌ದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ABOUT THE AUTHOR

...view details