ಶ್ರೀನಗರ:ರಾತ್ರೋರಾತ್ರಿ ಹೈಡ್ರಾಮಾ, ಮಾಜಿ ಮುಖ್ಯಮಂತ್ರಿಗಳಿಗೆ ಗೃಹ ಬಂಧನ, ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿ, ಮಹತ್ವದ ವಿಧಿ ರದ್ದು. ಸದ್ಯ ಈ ಎಲ್ಲಾ ಘಟನಾವಳಿ ನಡೆದು 12 ದಿನ ಕಳೆದಿದ್ದು ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರ ಮತ್ತೆ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಹಿಂದಿನ ರಾತ್ರಿ ಮುನ್ನೆಚ್ಚರಿಕಾ ಕ್ರಮವಾಗಿ ಮಾಜಿ ಸಿಎಂಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿಯನ್ನು ಹರಿ ನಿವಾಸ್ ಪ್ಯಾಲೇಸ್ನಲ್ಲಿ ಗೃಹ ಬಂಧನದಲ್ಲಿಡಲಾಗಿತ್ತು. ನಂತರದಲ್ಲಿ ಇಬ್ಬರನ್ನೂ ಪ್ರತ್ಯೇಕ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು.