ವಡಾಲಿ(ಗುಜರಾತ್) : ಪರಸ್ಪರ ಪ್ರೀತಿಸುತ್ತಿದ್ದ ಜೋಡಿವೊಂದು ಕಳೆದ ಕೆಲ ದಿನಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿದ್ದು, ಇದೀಗ ಗ್ರಾಮದ ಹೊರವಲಯದಲ್ಲಿರುವ ಬೇವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪ್ರೀತಿಸಿ ಓಡಿ ಹೋಗಿದ್ದ ಲವರ್ಸ್: ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆ! - ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಗ್ರಾಮದ ಹೊರವಲಯದಲ್ಲಿನ ಬೇವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ತನಿಖೆ ಆರಂಭಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
boy and girl committed suicide
ಗುಜರಾತ್ನ ವಡಾಲಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದು, ಇದು ಕೊಲೆ ಅಥವಾ ಆತ್ಮಹತ್ಯೆ ಎಂದು ತಕ್ಷಣವೇ ಹೇಳಲು ಸಾಧ್ಯವಿಲ್ಲ. ಮರಣೋತ್ತರ ಪರೀಕ್ಷೆ ವರದಿ ಹಾಗೂ ಪ್ರಾಥಮಿಕ ವರದಿ ಬಂದ ಬಳಿಕವೇ ಸತ್ಯಾಂಶ ಗೊತ್ತಾಗಲಿದೆ ಎಂದು ಹೇಳಿದ್ದಾರೆ.