ಕರ್ನಾಟಕ

karnataka

ETV Bharat / bharat

ಕಳೆದ 24 ಗಂಟೆಯಲ್ಲಿ 354 ಸೋಂಕಿತರು, ಈವರೆಗೆ ದೇಶದಲ್ಲಿ 114 ಜನ ಸಾವು! - ಭಾರತ ಕೊರೊನಾ ಸುದ್ದಿ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ 4,421ಕ್ಕೇರಿದೆ. ಇದರಲ್ಲಿ 366 ಜನ ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ಸದ್ಯ 3,981 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

corona
ಕೊರೊನಾ

By

Published : Apr 7, 2020, 9:42 AM IST

ನವದೆಹಲಿ:ದೇಶದಲ್ಲಿ ಸೋಂಕಿತರ ಸಂಖ್ಯೆ 4,421ಕ್ಕೇರಿದ್ದು, ಈವರೆಗೆ ದೇಶದಲ್ಲಿ ಒಟ್ಟು 114 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಅಂಕಿ ಅಂಶಗಳ ಪ್ರಕಾರ, ಈವರೆಗೆ 366 ಜನ ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ಸದ್ಯ 3,981 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಈವರೆಗೆ ದೇಶದಲ್ಲಿ ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 4,421ಕ್ಕೇರಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 354. ಇದಲ್ಲದೆ 5 ಜನ ಮಾರಕ ಸೋಂಕಿಗೆ ಒಂದೇ ದಿನದಲ್ಲಿ ಬಲಿಯಾಗಿದ್ದಾರೆ.

ABOUT THE AUTHOR

...view details