ಆಕ್ಲೆಂಡ್:ನ್ಯೂಜಿಲೆಂಡ್ ನೆಲದಲ್ಲಿ ಟೀಂ ಇಂಡಿಯಾ ಇಂದು ಮೊದಲ ಟಿ-20 ಪಂದ್ಯದಲ್ಲಿ ಭಾಗಿಯಾಗಲಿದ್ದು, ಗೆಲುವಿನೊಂದಿಗೆ ಸರಣಿಯಲ್ಲಿ ಶುಭಾರಂಭ ಮಾಡುವ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ.
ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ಮಧ್ಯಾಹ್ನ 12:30ಕ್ಕೆ ಪಂದ್ಯ ಆರಂಭಗೊಳ್ಳಲಿದ್ದು, ಆತ್ಮವಿಶ್ವಾಸದೊಂದಿಗೆ ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
ಆರಂಭಿಕ ಆಟಗಾರ ಶಿಖರ್ ಧವನ್, ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟ್ಸ್ಮನ್ ಹಾರ್ದಿಕ್ ಪಾಂಡ್ಯ ಹಾಗೂ ವೇಗಿ ಭುವನೇಶ್ವರ್ ಕುಮಾರ್ ಗಾಯಗೊಂಡು ತಂಡದಿಂದ ಹೊರಗುಳಿದಿರುವ ಕಾರಣ ಹೊಸ ಮುಖಗಳು ತಮ್ಮ ಪ್ರತಿಭೆ ಅನಾವರಣಗೊಳಿಸಲು ಹೊಸ ವೇದಿಕೆ ಇದಾಗಿದೆ.
ಭಾರತ- ನ್ಯೂಜಿಲ್ಯಾಂಡ್ ಸಂಪೂರ್ಣ ವೇಳಾಪಟ್ಟಿ ನ್ಯೂಜಿಲೆಂಡ್ ಪಿಚ್ಗಳು ವೇಗಿಗಳಿಗೆ ಹೆಚ್ಚಿನ ನೆರವು ನೀಡುವ ಕಾರಣ ವೇಗದ ಬೌಲರ್ಗಳಿಗೆ ಹೆಚ್ಚಿನ ಅವಕಾಶ ನೀಡುವ ಸಾಧ್ಯತೆ ಇದೆ. ಪ್ರಮುಖವಾಗಿ ಶಾರ್ದೂಲ್ ಠಾಕೂರ್, ನವದೀಪ್ ಸೈನಿ, ಜಸ್‍ಪ್ರೀತ್ ಬುಮ್ರಾ ಮೈದಾನದಲ್ಲಿ ತಮ್ಮ ಸಾಮರ್ಥ್ಯ ಸಾಬೀತು ಪಡಿಸಲು ಕಣಕ್ಕಿಳಿಯಲಿದ್ದಾರೆ.
ರೋಹಿತ್ ಶರ್ಮಾ ಜತೆ ಆರಂಭಿಕನಾಗಿ ಕಣಕ್ಕಿಳಿಯಲಿರುವ ಕೆ.ಎಲ್. ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ಹೊತ್ತುಕೊಂಡಿರುವ ಕಾರಣ ಪಂತ್ ಹಾಗೂ ಸ್ಯಾಮ್ಸನ್ ಅವರಲ್ಲೊಬ್ಬರು ಬೆಂಚ್ ಕಾಯುವ ಸಾಧ್ಯತೆ ದಟ್ಟವಾಗಿದೆ. ನ್ಯೂಜಿಲೆಂಡ್ ತಂಡ ಕೂಡ ಎಲ್ಲ ವಿಭಾಗದಲ್ಲೂ ಶಕ್ತಿಯುತವಾಗಿರುವ ಕಾರಣ ಉಭಯ ತಂಡಗಳ ನಡುವೆ ಬಿಗ್ಫೈಟ್ ಮೂಡಿ ಬರುವುದು ಖಚಿತವಾಗಿದೆ. ಮಾರ್ಟಿನ್ ಗಪ್ಟಿಲ್, ಕಾಲಿನ್ ಮನ್ರೊ, ಕೇನ್ ವಿಲಿಯಮ್ಸನ್, ರಾಸ್ ಟೈಲರ್ ನ್ಯೂಜಿಲೆಂಡ್ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ. ಕಾಲಿನ್ ಡಿ ಗ್ರ್ಯಾಂಡ್‍ಹೋಮ್, ಡ್ಯಾರಿಲ್ ಮಿಚೆಲ್, ಸಾಂಟ್ನರ್ ಅಲ್ರೌಂಡರ್ ಸ್ಥಾನ ತುಂಬಲಿದ್ದಾರೆ. ಟೀಂ ಸೌಥಿ, ಇಶಾ ಸೋದಿ, ಬ್ಲೇರ್ ಟೆಕ್ನರ್, ಸ್ಕಾಟ್ ಕುಗ್ಗೆಲೀಜ್ನ್, ಹಮೀಶ್ ಬೆನೆಟ್ ಬೌಲಿಂಗ್ ಪಡೆಯಲ್ಲಿದ್ದಾರೆ.
ತಂಡಗಳ ವಿವರ
ಭಾರತ:ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶಾರ್ಮಾ, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್‍ಪ್ರೀತ್ ಬೂಮ್ರಾ, ಯಜುವೇಂದ್ರ ಚಹಲ್, ಸಂಜು ಸಾಮ್ಸನ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಿವಂ ದುಬೆ, ಕುಲದೀಪ್ ಯಾದವ್.
ನ್ಯೂಜಿಲ್ಯಾಂಡ್: ಕೇನ್ ವಿಲಿಯಮ್ಸನ್ (ನಾಯಕ), ಮಾರ್ಟಿನ್ ಗಪ್ಟಿಲ್, ಕಾಲಿನ್ ಮನ್ರೋ, ಟೀ ಸೈಫರ್ಟ್, ರಾಸ್ ಟೇಲರ್, ಕಾಲಿನ್ ಡಿ ಗ್ರ್ಯಾಂಡ್‍ಹೋಮ್, ಡ್ರಾಲ್ ಮಿಚೆಲ್, ಮಿಚೆಲ್ ಸಾಂಟ್ನರ್, ಟೀ ಸೌಥಿ, ಇಶಾ ಸೋಧಿ, ಬ್ಲೇರ್ ಟೆಕ್ನರ್, ಸ್ಕಾಟ್ ಕುಗ್ಗೆಲೀಜ್ನ್, ಹಮೀಶ್ ಬೆನೆಟ್.