ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ಮತ್ತೊಂದು ಮೈಲಿಗಲ್ಲು ಎಂಬಂತೆ ಕೇವಲ 11 ದಿನಗಳಲ್ಲಿ 2 ಮಿಲಿಯನ್ ಕೊರೊನಾ ವ್ಯಾಕ್ಸಿನ್ ಡೋಸ್ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಇಲ್ಲಿಯವರೆಗೆ 29,28,053 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ. ಎರಡು ಮಿಲಿಯನ್ ಡೋಸ್ಗಳನ್ನು ನೀಡಲು ಅಮೆರಿಕ 15 ದಿನಗಳನ್ನು ತೆಗೆದುಕೊಂಡಿದ್ದರೆ, ಇಸ್ರೇಲ್ 27, ಇಂಗ್ಲೆಂಡ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) 37 ದಿನಗಳನ್ನು ತೆಗೆದುಕೊಂಡಿದೆ. ಆದರೆ, ಭಾರತ ಅತಿ ವೇಗವಾಗಿ ಅಂದರೆ ಕೇವಲ 11 ದಿನಗಳಲ್ಲಿ ಈ ಸಾಧನೆ ಮಾಡಿದೆ.
ಲಸಿಕೆ ಹಾಕಿಸಿಕೊಂಡವರಿಗೆ ಸೌಮ್ಯ ಜ್ವರ, ತಲೆಸುತ್ತುವಿಕೆ, ಅಲರ್ಜಿ, ತಲೆನೋವಿನಂತಹ ಸಣ್ಣಪುಟ್ಟ ವ್ಯತ್ಯಾಸಗಳು ಕಂಡುಬರುವುದು ಸಹಜ. ಯಾವುದೇ ಲಸಿಕೆ ಪಡೆದರೂ ಅಡ್ಡ ಪರಿಣಾಮಗಳು ಇದ್ದೇ ಇರುತ್ತದೆ. ನಮ್ಮ ಲಸಿಕೆಗಳು ಸುರಕ್ಷಕ ಹಾಗೂ ಪರಿಣಾಮಕಾರಿ. ಲಸಿಕೆ ಪಡೆದ ಕೆಲ ಆರೋಗ್ಯ ಕಾರ್ಯಕರ್ತರು ಮೃತಪಟ್ಟಿದ್ದಾರೆ. ಆದರೆ ಈ ಸಾವುಗಳು ಕೊರೊನಾ ವ್ಯಾಕ್ಸಿನೇಷನ್‌ಗೆ ಸಂಬಂಧಿಸಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.