ನವದೆಹಲಿ: ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಮಾತುಕತೆಯ ನಂತರ ವ್ಯಾಪಾರ ಮತ್ತು ಹೂಡಿಕೆ, ತೈಲ ಮತ್ತು ಅನಿಲ, ಸೈಬರ್ ಭದ್ರತೆ ಮತ್ತು ಮಾಹಿತಿ ತಂತ್ರಜ್ಞಾನದಂತಹ ವ್ಯಾಪಕ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಭಾರತ ಮತ್ತು ಬ್ರೆಜಿಲ್ ಶನಿವಾರ 15 ಒಪ್ಪಂದಗಳನ್ನು ಮಾಡಿಕೊಂಡಿವೆ.
ಎರಡು ಕಾರ್ಯತಂತ್ರದ ಪಾಲುದಾರರ ನಡುವಿನ ಸಂಬಂಧಗಳನ್ನು ಇನ್ನಷ್ಟು ವಿಸ್ತರಿಸಲು ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ನಿಮ್ಮ ಭೇಟಿ ಭಾರತ ಮತ್ತು ಬ್ರೆಜಿಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ತೆರೆದಿದೆ ಎಂದು ಮೋದಿ ಬೋಲ್ಸನಾರೊಗೆ ತಿಳಿಸಿದರು.