ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಸೃಷ್ಟಿಯಾಗಿರುವ ಭಾರತ-ಚೀನಾ ನಡುವಿನ ಗಡಿ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಲು ಭಾರತ ಮತ್ತು ಚೀನಾದ ಮಿಲಿಟರಿ ಕಮಾಂಡರ್‌ಗಳು ಒಪ್ಪಿದ್ದಾರೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಗಡಿ ಪರಿಸ್ಥಿತಿಯನ್ನು ಶಾಂತಿಯುತವಾಗಿ ಬಗೆಹರಿಸಲು ಭಾರತ-ಚೀನಾ ಸಮ್ಮತಿ: ವಿದೇಶಾಂಗ ಇಲಾಖೆ - MEA
"ವಿವಿಧ ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಸಾರವಾಗಿ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಶಾಂತಿಯುತವಾಗಿ ಪರಿಹರಿಸಲು ಎರಡೂ ರಾಷ್ಟ್ರಗಳು ಒಪ್ಪಿಕೊಂಡಿವೆ. ದ್ವಿಪಕ್ಷೀಯ ಸಂಬಂಧಗಳ ವೃದ್ಧಿಗೆ ಭಾರತ-ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಅಗತ್ಯ ಎಂದು ನಾಯಕರ ನಡುವಿನ ಒಪ್ಪಂದವನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ" - ಭಾರತೀಯ ವಿದೇಶಾಂಗ ಸಚಿವಾಲಯ
ಪೂರ್ವ ಲಡಾಖ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ಸೃಷ್ಟಿಯಾಗಿರುವ ಗಡಿ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳ ನಡುವೆ ಕಳೆದ ಶನಿವಾರ ಉನ್ನತ ಮಟ್ಟದ ಮಾತುಕತೆ ನಡೆದಿತ್ತು.
"ವಿವಿಧ ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಸಾರವಾಗಿ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಶಾಂತಿಯುತವಾಗಿ ಬಗೆಹರಿಸಲು ಎರಡೂ ರಾಷ್ಟ್ರಗಳು ಒಪ್ಪಿಕೊಂಡಿವೆ. ದ್ವಿಪಕ್ಷೀಯ ಸಂಬಂಧಗಳ ವೃದ್ಧಿಗೆ ಭಾರತ-ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಅಗತ್ಯ ಎಂದು ನಾಯಕರ ನಡುವಿನ ಒಪ್ಪಂದವನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ" ಎಂದು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.