ನವದೆಹಲಿ:ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ ಅಣೆಕಟ್ಟು ನಿರ್ಮಿಸಲು ಪಾಕಿಸ್ತಾನ ಗುತ್ತಿಗೆ ನೀಡುತ್ತಿರುವುದನ್ನು ವಿರೋಧಿಸಿದ ಭಾರತ, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ಇಂತಹ ಯೋಜನೆಗಳನ್ನು ಕೈಗೊಳ್ಳುವುದು ಸೂಕ್ತವಲ್ಲ ಎಂದು ಹೇಳಿದೆ.
ಆಕ್ರಮಿತ ಪ್ರದೇಶದಲ್ಲಿ ಪಾಕ್ ಅಣೆಕಟ್ಟು ನಿರ್ಮಿಸುವುದು ಸೂಕ್ತವಲ್ಲ: ಅನುರಾಗ್ ಶ್ರೀವಾಸ್ತವ
ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತದ ಪ್ರದೇಶದಲ್ಲಿ ಅಣೆಕಟ್ಟು ನಿರ್ಮಿಸಲು ಮುಂದಾಗಿರುವುದು ಸೂಕ್ತವಲ್ಲ ಎಂದು ಭಾರತ ಹೇಳಿದೆ.
pok
ಡೈಮರ್-ಭಾಷಾ ಅಣೆಕಟ್ಟು ನಿರ್ಮಾಣಕ್ಕಾಗಿ ಪಾಕಿಸ್ತಾನ ಸರ್ಕಾರವು ಚೀನಾದ ಸರ್ಕಾರಿ ಸಂಸ್ಥೆಯೊಂದಿಗೆ 442 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದೆ.
"ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಕೇಂದ್ರಾಡಳಿತ ಪ್ರದೇಶಗಳ ಸಂಪೂರ್ಣ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ. ಈ ಪ್ರದೇಶದ ಪಾಕಿಸ್ತಾನಿ ಆಕ್ರಮಿತ ಭಾಗದಲ್ಲಿ ಇಂತಹ ಚಟುವಟಿಕೆಗಳು ಸೂಕ್ತವಲ್ಲ" ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.
Last Updated : May 15, 2020, 9:14 AM IST