ಕರ್ನಾಟಕ

karnataka

ETV Bharat / bharat

ಭಾರತದಲ್ಲಿ 5 ಲಕ್ಷದ ಗಡಿ ದಾಟಿದ ಕೋವಿಡ್​ ಕೇಸ್​: ಶೇ 58ರಷ್ಟು ರೋಗಿಗಳು ಗುಣಮುಖ

ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿದ್ದು, ಈ ಪೈಕಿ ಮಹಾರಾಷ್ಟ್ರದಲ್ಲೇ ಒಂದೂವರೆ ಲಕ್ಷ ಸೋಂಕಿತರಿದ್ದಾರೆ.

India crosses 5 lakh mark
ಕೋವಿಡ್

By

Published : Jun 27, 2020, 10:25 AM IST

ನವದೆಹಲಿ: ಭಾರತದಲ್ಲಿ ಮಾರಣಾಂತಿಕ ಕೊರೊನಾ ಹಾವಳಿ ಹೆಚ್ಚಾಗಿದ್ದು, ಇದೀಗ ಸೋಂಕಿತರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಇನ್ನೊಂದೆಡೆ ಚೇತರಿಕೆಯ ಪ್ರಮಾಣ ಕೂಡ ಶೇ.58.14ಕ್ಕೆ ಹೆಚ್ಚಳವಾಗಿದೆ.

ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 18,552 ಕೇಸ್​ಗಳು ಪತ್ತೆಯಾಗಿದ್ದು, 384 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5,08,953ಕ್ಕೆ ಹಾಗೂ ಮೃತರ ಸಂಖ್ಯೆ 15,685ಕ್ಕೆ ಏರಿಕೆಯಾಗಿದೆ.

ಕೋವಿಡ್​ ಕೇಸ್​ಗಳ ಹಾಗೂ ಸಾವಿನ ಸಂಖ್ಯೆಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಒಂದೂವರೆ ಲಕ್ಷ ಸೋಂಕಿತರಿದ್ದಾರೆ. ಇಲ್ಲಿ ನಿನ್ನೆ ಒಂದೇ ದಿನ 5024 ಸಾವಿರ ಮಂದಿಗೆ ವೈರಸ್​ ತಗುಲಿದ್ದು, 174 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,52,765ಕ್ಕೆ ಹಾಗೂ ಸಾವಿನ ಸಂಖ್ಯೆ 7,106ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಚೇತರಿಕೆಯ ಪ್ರಮಾಣದಲ್ಲಿ ಕೂಡ ಗಣನೀಯ ಏರಿಕೆ ಕಂಡು ಬಂದಿದ್ದು, ಶೇ.58.14 ರಷ್ಟು ಅಂದರೆ 2,95,881 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 1,97, 387 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details