ನವದೆಹಲಿ:ಕೊರೊನಾ ಸೋಂಕಿನ ಕಾರಣಕ್ಕೆ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಯಾನ ಸೇವೆಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದ್ದು, ಈ ನಿರ್ಬಂಧವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿದೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) 'ಕೋವಿಡ್-19ಗೆ ಸಂಬಂಧಿಸಿದ ಪ್ರಯಾಣ ಮತ್ತು ವೀಸಾ ನಿರ್ಬಂಧಗಳು' ಎಂಬ ಅಧಿಸೂಚನೆಯ ಅಡಿ ಈ ಘೋಷಣೆ ಮಾಡಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಗೆ ಇದ್ದ ನಿರ್ಬಂಧವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ
"ಈ ನಿರ್ಬಂಧವು ಅಂತಾರಾಷ್ಟ್ರೀಯ ಸರಕು ಸಾಗಣೆ ಹಾಗೂ ಮತ್ತು ಡಿಜಿಸಿಎ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ" ಎಂದು ಆದೇಶದಲ್ಲಿ ತಿಳಿಸಲಾಗಿದೆ.