ಕರ್ನಾಟಕ

karnataka

ETV Bharat / bharat

ಕೊರೊನಾ ಸೋಂಕು ದೊಡ್ಡ ಪ್ರಮಾಣದಲ್ಲಿ ಹರಡುವುದನ್ನು ತಪ್ಪಿಸುವಲ್ಲಿ ಭಾರತ ಯಶಸ್ವಿಯಾಗಿದೆ: ರಾಮನಾಥ್ ಕೋವಿಂದ್ - ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಯಶಸ್ವಿ

ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಅಂತಾರಾಷ್ಟ್ರೀಯ ಪ್ರಯತ್ನಗಳನ್ನು ಒಟ್ಟುಗೂಡಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

President Ram Nath Kovind
ರಾಮನಾಥ್ ಕೋವಿಂದ್

By

Published : Jun 3, 2020, 9:47 PM IST

ನವದೆಹಲಿ: ಕೋವಿಡ್ -19 ಹರಡುವಿಕೆಯನ್ನು ನಿಯಂತ್ರಿಸಲು ಭಾರತ ತೀವ್ರ ಪ್ರಯತ್ನ ಮಾಡಿದ್ದು, ಅದರಲ್ಲಿ ಯಶಸ್ವಿಯಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಜಾರ್ಜಿಯಾದ ಅಧ್ಯಕ್ಷ ಸಲೋಮ್ ಜೌರಾಬಿಚ್ವಿಲಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಅಂತಾರಾಷ್ಟ್ರೀಯ ಪ್ರಯತ್ನಗಳನ್ನು ಒಟ್ಟುಗೂಡಿಸುವಲ್ಲಿ ಭಾರತವು ಮುಂಚೂಣಿಯಲ್ಲಿದ್ದು,150ಕ್ಕೂ ಹೆಚ್ಚು ದೇಶಗಳಿಗೆ ವೈದ್ಯಕೀಯ ವಸ್ತುಗಳ ಸರಬರಾಜಿನಲ್ಲೂ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದ್ದಾರೆ.

ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸಲು ಭಾರತ ತೀವ್ರ ಪ್ರಯತ್ನಗಳನ್ನು ಮಾಡಿದೆ. ಈ ಕಾರ್ಯದಲ್ಲಿ ನಾವು ಹೆಚ್ಚಿನ ಪ್ರಮಾಣದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಜಾರ್ಜಿಯಾದ ಅಧ್ಯಕ್ಷರಿಗೆ ಮಾಹಿತಿ ನೀಡಿದರು ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಸಾಂಕ್ರಾಮಿಕ ರೋಗದಿಂದ ಪ್ರಪಂಚವು ಎದುರಿಸುತ್ತಿರುವ ಸವಾಲುಗಳು ಮತ್ತು ಪ್ರಪಂಚದಾದ್ಯಂತ ಇರುವ ಅಡೆತಡೆಗಳನ್ನು ಗಮನಿಸಿದ ಅಧ್ಯಕ್ಷರು, ಕೊರೊನಾ ವೈರಸ್ ಹರಡುವಿಕೆ ತಡೆಯುವಲ್ಲಿ ಜಾರ್ಜಿಯಾದ ಪ್ರಯತ್ನಗಳು ಗಮನಾರ್ಹವಾಗಿವೆ ಎಂದಿದ್ದಾರೆ. ಅಲ್ಲದೆ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಜಾಗತಿಕ ಸಮುದಾಯವು ಒಟ್ಟಾಗಿ ಕೆಲಸ ಮಾಡಬೇಕು ಎಂದು ಉಭಯ ರಾಷ್ಟ್ರಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ. ಜಾರ್ಜಿಯಾದೊಂದಿಗೆ ಭಾರತ ಉತ್ತಮ ಸ್ನೇಹ ಸಂಬಂಧ ಹೊಂದಿದೆ. ವ್ಯಾಪಾರ, ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಸಂಬಂಧಗಳಿಗೆ ಉಭಯ ದೇಶಗಳು ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details