ಕರ್ನಾಟಕ

karnataka

ETV Bharat / bharat

ಭಾರತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಇಳಿಮುಖ

ಪ್ರತಿನಿತ್ಯ 10 ಲಕ್ಷಕ್ಕೂ ಅಧಿಕ ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದರೂ 5 ವಾರಗಳಿಂದ ಪಾಸಿಟಿವ್​ ಕೇಸ್​ಗಳು ಕಡಿಮೆ ಸಂಖ್ಯೆಯಲ್ಲಿ ಕಂಡುಬರುತ್ತಿದೆ. ಗುಣಮುಖರ ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಸಕ್ರಿಯ ಪ್ರಕರಣಗಳು ಇಳಿಮುಖವಾಗುತ್ತಿದೆ.

otal number of corona cases in India
ಹೊಸ ಕೋವಿಡ್​ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ

By

Published : Oct 13, 2020, 10:34 AM IST

ನವದೆಹಲಿ: ಸತತ ಐದು ವಾರಗಳಿಂದ ದೇಶದಲ್ಲಿ ಪತ್ತೆಯಾಗುತ್ತಿರುವ ಹೊಸ ಕೋವಿಡ್​ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಹಿಂದಿನ ಕೆಲ ತಿಂಗಳುಗಳಿಗೆ ಹೋಲಿಸಿದರೆ ನಿನ್ನೆ ವರದಿಯಾದ ಕೇಸ್​ಗಳು ಹಾಗೂ ಸಾವುಗಳು ತೀರಾ ಕಡಿಮೆ ಇದೆ.

ಹೊಸ ಕೋವಿಡ್​ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ

ಕಳೆದ 24 ಗಂಟೆಗಳಲ್ಲಿ 55,342 ಸೋಂಕಿತರು ಪತ್ತೆಯಾಗಿದ್ದು, 706 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 71,75,881 ಹಾಗೂ ಮೃತರ ಸಂಖ್ಯೆ 1,09,856ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 62,27,296 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 8,38,729 ಕೇಸ್​​ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಅಕ್ಟೋಬರ್ 12ರ ವರೆಗೆ 8,89,45,107 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,73,014 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ABOUT THE AUTHOR

...view details