ನವದೆಹಲಿ :ದೇಶದಲ್ಲಿ ಕಳೆದ 12 ಗಂಟೆಗಳಲ್ಲಿ 547 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದೇ ಸಮಯದಲ್ಲಿ 30 ಜನ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾಗೆ ಸಂಬಂಧಿಸಿದ ಪ್ರಕರಣ 6,412ಕ್ಕೇರಿದೆ.
ದೇಶದಲ್ಲಿ ಏರುತ್ತಲೇ ಇದೆ ಸೋಂಕಿತರ ಸಂಖ್ಯೆ.. ಕಳೆದ 12 ಗಂಟೆಯಲ್ಲಿ 547 ಹೊಸ ಪ್ರಕರಣ.. - ಕಳೆದ 12 ಗಂಟೆಗಳಲ್ಲಿ 547 ಹೊಸ ಪ್ರಕರಣ
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ ಈವರೆಗೆ ದೇಶದಲ್ಲಿ ಒಟ್ಟು 199 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 5,709 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 504 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,364ಕ್ಕೇರಿದೆ. ಈವರೆಗೆ ಇಲ್ಲಿ 97 ಜನ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಹೆಚ್ಚು ಸೋಂಕಿತರು ಹಾಗೂ ಸಾವನ್ನಪ್ಪಿದವರಲ್ಲಿ ಮಹಾರಾಷ್ಟ್ರಕ್ಕೆ ಅಗ್ರಸ್ಥಾನ. ತಮಿಳುನಾಡಿನಲ್ಲಿ ಈವರೆಗೆ 834 ಕೊರೊನಾ ಪ್ರಕರಣ ವರದಿಯಾಗಿವೆ. ರಾಜಧಾನಿ ದೆಹಲಿಯಲ್ಲಿ 720 ಜನರಿಗೆ ಕೊರೊನಾ ಸೋಂಕು ತಗುಲಿದೆ. ರಾಜಸ್ಥಾನದಲ್ಲಿ ಒಟ್ಟು 463 ಪ್ರಕರಣಗಳು ವರದಿಯಾಗಿವೆ. ತೆಲಂಗಾಣದಲ್ಲಿ 442 ಹಾಗೂ ಉತ್ತರ ಪ್ರದೇಶದಲ್ಲಿ 410 ಪ್ರಕರಣ ದಾಖಲಾಗಿವೆ.