ನವದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಹೊಸ ಪಾಸಿಟಿವ್ ಕೇಸ್ ವರದಿಯಾಗಿದ್ದು, ದೇಶದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 60 ಸಾವಿರ ಗಡಿದಾಟಿದೆ. ಇನ್ನೊಂದೆಡೆ ದೇಶದಲ್ಲಿ ಈವರೆಗೆ 19,357 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ ಈವರೆಗೆ ದೇಶದಲ್ಲಿ ಒಟ್ಟು 2109 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರಲ್ಲಿ 127 ಜನ ಕಳೆದ ಒಂದೇ ದಿನ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 41,472 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದಂತೆ 19357 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 20,228ಕ್ಕೇರಿದ್ದು, ಈವರೆಗೆ ಇಲ್ಲಿ 779 ಜನ ಸಾವನ್ನಪ್ಪಿದ್ದಾರೆ. ಗುಜರಾತ್ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 7796 ಕ್ಕೇರಿದ್ದು, 472 ಜನ ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ರಾಜಧಾನಿ ದೆಹಲಿಯಲ್ಲಿ 6542 ಜನರಿಗೆ ಕೊರೊನಾ ಸೋಂಕು ತಗುಲಿದ್ದರೆ, ತಮಿಳುನಾಡಿನಲ್ಲಿ ಈವರೆಗೆ 6535 ಕೊರೊನಾ ಪ್ರಕರಣಗಳು ವರದಿಯಾಗಿದೆ.