ಕರ್ನಾಟಕ

karnataka

ETV Bharat / bharat

ಗಿಲ್ಗಿಟ್​-ಬಾಲ್ಟಿಸ್ತಾನದಿಂದ ಈಗಲೇ ತೊಲಗಿ: ಪಾಕ್​ಗೆ ಭಾರತ ಖಡಕ್ ಎಚ್ಚರಿಕೆ - ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್

ಪಾಕಿಸ್ತಾನದ ಸುಪ್ರೀಂಕೋರ್ಟ್ ತನ್ನ ಇತ್ತೀಚಿನ ಆದೇಶದಲ್ಲಿ, ಈ ಪ್ರದೇಶದಲ್ಲಿ ಈ ಪ್ರದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಜತೆಗೆ 2018ರ 'ಗಿಲ್ಗಿಟ್ ಬಾಲ್ಟಿಸ್ತಾನ್ ಸರ್ಕಾರದ ಆದೇಶಕ್ಕೆ ತಿದ್ದುಪಡಿ ತರಲು ಅನುಮತಿ ನೀಡಿತ್ತು. ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿರುವ ಭಾರತ ಭಾರತದ ಜಾಗದ ಮೇಲೆ ತೀರ್ಮಾನ ನೀಡಲು ಯಾರು ಎಂದು ಪ್ರಶ್ನೆ ಮಾಡಿದೆ.

India
ಭಾರತ

By

Published : May 4, 2020, 9:39 PM IST

ನವದೆಹಲಿ: ಗಿಲ್ಗಿಟ್ ಮತ್ತು ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಲು ಪಾಕಿಸ್ತಾನದ ಸುಪ್ರೀಂಕೋರ್ಟ್ ನೀಡಿದ ಆದೇಶದ ವಿರುದ್ಧ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ಪ್ರದೇಶಗಳು ಸೇರಿದಂತೆ ಇಡೀ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿವೆ. ಇಸ್ಲಾಮಾಬಾದ್ ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶಗಳನ್ನು ತಕ್ಷಣ ಖಾಲಿ ಮಾಡಬೇಕೆಂದು ಪಾಕಿಸ್ತಾನಕ್ಕೆ ತಿಳಿಸಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಪಾಕಿಸ್ತಾನದ ಸುಪ್ರೀಂಕೋರ್ಟ್ ತನ್ನ ಇತ್ತೀಚಿನ ಆದೇಶದಲ್ಲಿ, ಈ ಪ್ರದೇಶದಲ್ಲಿ ಈ ಪ್ರದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಜತೆಗೆ 2018 ರ 'ಗಿಲ್ಗಿಟ್ ಬಾಲ್ಟಿಸ್ತಾನ್ ಸರ್ಕಾರದ ಆದೇಶಕ್ಕೆ ತಿದ್ದುಪಡಿ ತರಲು ಅನುಮತಿ ನೀಡಿತ್ತು. ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿರುವ ಭಾರತದ ಜಾಗದ ಮೇಲೆ ತೀರ್ಮಾನ ನೀಡಲು ಯಾರು ಎಂದು ಪ್ರಶ್ನೆ ಮಾಡಿದೆ.

ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ಪ್ರದೇಶಗಳನ್ನು ಒಳಗೊಂಡಂತೆ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್​ ಸಂಪೂರ್ಣ ಕೇಂದ್ರಾಡಳಿತ ಪ್ರದೇಶಗಳು ಭಾರತದ ಸಂಪೂರ್ಣ ಕಾನೂನಿಗೆ ಒಳಪಟ್ಟಿದ್ದು, ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.

ಪಾಕಿಸ್ತಾನ ಸರ್ಕಾರ ಅಥವಾ ಅದರ ನ್ಯಾಯಾಂಗವು ಕಾನೂನುಬಾಹಿರವಾಗಿ ಮತ್ತು ಬಲವಂತವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳ ಮೇಲೆ ಯಾವುದೇ ನಿಲುವು ಹೊಂದಿಲ್ಲ ಎಂದಿದೆ.

ABOUT THE AUTHOR

...view details