ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,788 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 145 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,05,71,773 ಕ್ಕೆ ಹಾಗೂ ಮೃತರ ಸಂಖ್ಯೆ 1,52,419ಕ್ಕೆ ಏರಿಕೆಯಾಗಿದೆ.
14,457 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 1,02,11,342 ಜನ ಗುಣಮುಖರಾಗಿದ್ದಾರೆ. ಉಳಿದಂತೆ 2,08,012 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.