ನವೆದೆಹಲಿ:ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ ಸೋಂಕಿತ ಪ್ರಕರಣಗಳು ಏರಿಕೆ ಕಂಡಿವೆ.
ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 20,550 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,02,44,853 ಕ್ಕೆ ಏರಿದೆ.

286 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,48,439 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 26,572 ಜನ ಕೋವಿಡ್-19ನಿಂದ ಗುಣಮುಖರಾಗಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 98,34,141 ತಲುಪಿದೆ. ಸದ್ಯ 2,62,272 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
ಓದಿ:‘ಭಾರತದ ಲಸಿಕೆಗಳು ಕೊರೊನಾ ರೂಪಾಂತರದ ವಿರುದ್ಧ ಕಾರ್ಯನಿರ್ವಹಿಸುತ್ತವೆ’
ನಿನ್ನೆ 11,20,281 ಮಾದರಿಗಳನ್ನು ಪರೀಕ್ಷಿಸಿದ್ದು, ಡಿಸೆಂಬರ್ 29 ರವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳು 17,09,22,030 ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.