ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ ಅತಿ ಹೆಚ್ಚು ಕೇಸ್ಗಳು ಹಾಗೂ ಸಾವು ವರದಿಯಾಗಿದೆ.
ಭಾರತದಲ್ಲಿ ಒಂದೇ ದಿನದಲ್ಲಿ 9,887 ಕೊರೊನಾ ಕೇಸ್ ಪತ್ತೆ, 294 ಸೋಂಕಿತರು ಸಾವು
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಬರೋಬ್ಬರಿ 9,887 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 294 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,36,657ಕ್ಕೆ ಹಾಗೂ ಮೃತರ ಸಂಖ್ಯೆ 6,642ಕ್ಕೆ ಏರಿಕೆಯಾಗಿದೆ.
ಕೊರೊನಾ
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 9,887 ಸೋಂಕಿತರು ಪತ್ತೆಯಾಗಿದ್ದು, 294 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,36,657ಕ್ಕೆ ಹಾಗೂ ಮೃತರ ಸಂಖ್ಯೆ 6,642ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಅರ್ಧದಷ್ಟು ಅಂದರೆ 1,14,073 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 1,15,942 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.