ನವದೆಹಲಿ:ಜಾಗತಿಕ ಮಹಾಮಾರಿ ಕೊರೊನಾ ಭಾರತದಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದ್ದು, ಇದೀಗ ಮೃತರ ಸಂಖ್ಯೆ 40 ಸಾವಿರ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 56,282 ಸೋಂಕಿತರು ಪತ್ತೆಯಾಗಿದ್ದು, 904 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 19,64,537ಕ್ಕೆ ಹಾಗೂ ಮೃತರ ಸಂಖ್ಯೆ 40,699ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 13,28,337 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 5,95,501 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಟೆಸ್ಟ್ ಅಪಡೇಟ್ಸ್ ಆಗಸ್ಟ್ 5ರ ವರೆಗೆ 2,21,49,351 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 6,64,949 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.