ನವದೆಹಲಿ: ಭಾರತದಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇನ್ನೊಂದೆಡೆ ಗುಣಮುಖರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡುಬರುತ್ತಿರುವುದು ತುಸು ನೆಮ್ಮದಿಗೆ ಕಾರಣವಾಗಿದೆ.
ದೇಶದಲ್ಲಿ ಒಂದೇ ದಿನ 13 ಸಾವಿರ ಕೋವಿಡ್ ಕೇಸ್ ಪತ್ತೆ: 2 ಲಕ್ಷ ಸೋಂಕಿತರು ಗುಣಮುಖ - ಕೋವಿಡ್ ಕೇಸ್
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,80,532ಕ್ಕೆ ಹಾಗೂ ಮೃತರ ಸಂಖ್ಯೆ 12,573ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಕೊರೊನಾ ಪ್ರಕರಣಗಳು
ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 13,586 ಸೋಂಕಿತರು ಪತ್ತೆಯಾಗಿದ್ದು, 336 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,80,532ಕ್ಕೆ ಹಾಗೂ ಮೃತರ ಸಂಖ್ಯೆ 12,573ಕ್ಕೆ ಏರಿಕೆಯಾಗಿದೆ.
2,04,711 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 1,63,248 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.