ನವದೆಹಲಿ:ಕೊರೊನಾ ವೈರಸ್ ವಿರುದ್ಧ ತುರ್ತು ಸಂದರ್ಭಗಳಲ್ಲಿ ಬಳಕೆ ಮಾಡಲು ಈಗಾಗಲೇ ಎರಡು ಲಸಿಕೆಗಳಿಗೆ ಔಷಧ ಮಹಾನಿಯಂತ್ರಕರು ಒಪ್ಪಿಗೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ ಎಲ್ಲ ರಾಜ್ಯಗಳಿಗೂ ಇದರ ರವಾನೆ ಆಗಲಿದೆ. ದೇಶದಲ್ಲಿ ನಾಳೆ ಎರಡನೇ ಹಂತರ ಡ್ರೈ ರನ್ ನಡೆಯಲಿದ್ದು, ಇದಾದ ಬಳಿಕ ಎಲ್ಲ ರಾಜ್ಯಗಳಿಗೂ ಕೋವಿಡ್ ವ್ಯಾಕ್ಸಿನ್ ರವಾನೆಯಾಗುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ.
ಇದರ ಬೆನ್ನಲ್ಲೇ ಮಹತ್ವದ ಮಾಹಿತಿ ಹೊರಬಿದ್ದಿದ್ದು, ನೆರೆಯ ರಾಷ್ಟ್ರಗಳಿಗೂ ಕೊರೊನಾ ಲಸಿಕೆ ನೀಡಲು ಭಾರತ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಪ್ರಮುಖವಾಗಿ ಬಾಂಗ್ಲಾದೇಶ, ಭೂತಾನ್, ನೇಪಾಳ, ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನಕ್ಕೂ ವ್ಯಾಕ್ಸಿನ್ ವಿತರಣೆ ಮಾಡಲು ನಿರ್ಧರಿಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಕೂಡ ಇದರ ಬಗ್ಗೆ ಭರವಸೆ ನೀಡಿದ್ದಾರೆ.