ನವದೆಹಲಿ:ಪ್ರಸ್ತುತ ಪ್ರವೃತ್ತಿಗಳ ಆಧಾರದ ಮೇಲೆ 2020ರ ಅಂತ್ಯದ ವೇಳೆಗೆ ದೇಶಾದ್ಯಂತ 13.9 ಲಕ್ಷ ಕ್ಯಾನ್ಸರ್ ಪ್ರಕರಣಗಳು ಕಂಡುಬರುತ್ತವೆ ಎಂದು ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ (ಎನ್‌ಸಿಆರ್‌ಪಿ) ವರದಿ ಅಂದಾಜಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ವರದಿ 2020ರ ಪ್ರಸ್ತುತ ಪ್ರವೃತ್ತಿಗಳ ಆಧಾರದ ಮೇಲೆ "ಬೆಂಗಳೂರಿನ ಐಸಿಎಂಆರ್ ಮತ್ತು ರಾಷ್ಟ್ರೀಯ ಕೇಂದ್ರ ರೋಗದ ಮಾಹಿತಿ ಮತ್ತು ಸಂಶೋಧನಾ ವರದಿ ಬಿಡುಗಡೆ ಮಾಡಿದೆ. 2020ರ ಅಂತ್ಯದ ವೇಳೆಗೆ ದೇಶದಲ್ಲಿ 13.9 ಲಕ್ಷ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಲಿವೆ ಎಂದು ಅಂದಾಜಿಸಲಾಗಿದೆ. ಈ ಸಂಖ್ಯೆ 2025ರ ವೇಳೆಗೆ 15.7 ಲಕ್ಷಕ್ಕೆ ತಲುಪಲಿದೆ ಎಂದು ಐಸಿಎಂಆರ್ ಟ್ವೀಟ್ ಮಾಡಿದೆ.