ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸ 30,548 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 88,45,127 ಕ್ಕೆ ಏರಿದೆ.
ದೇಶದಲ್ಲಿ ತಗ್ಗಿದ ಕೊರೊನಾ ಆರ್ಭಟ: ಮತ್ತೆ 43,851 ಮಂದಿ ಸೋಂಕಿನಿಂದ ಚೇತರಿಕೆ
ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದ್ದು, ನಿನ್ನೆ 43,851 ಮಂದಿ ಕೋವಿಡ್ನಿಂದ ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿ ತಗ್ಗಿದ ಕೊರೊನಾ ಆರ್ಭಟ
435 ಜನ ಕೊರೊನಾಗೆ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 1,30,070ಕ್ಕೆ ಏರಿದೆ. ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ 43,851 ಜನ ಗುಣಮುಖರಾಗಿದ್ದಾರೆ. ಇದರಿಂದಾಗಿ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 82,49,579ಕ್ಕೆ ಏರಿದೆ.
ದಿನವೊಂದಕ್ಕೆ 80 -90 ಸಾವಿರದ ಸಮೀಪದಲ್ಲಿ ಇರುತ್ತಿದ್ದ ಕೋವಿಡ್ ಪಾಸಿಟಿವ್ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಕಡಿಮೆ ಆಗುತ್ತಿವೆ. ಇದು ದೇಶದ ಜನರನ್ನ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.