ವಿಶಾಖಪಟ್ಟಣಂ: ಭಾರತ ಯಾವುದೇ ದೇಶದ ಮೇಲೆ ದಾಳಿ ನಡೆಸಲ್ಲ. ಒಂದುವೇಳೆ ಬೇರೆ ದೇಶಗಳು ಭಾರತದ ಮೇಲೆ ದಾಳಿಗೆ ಮುಂದಾದ್ರೆ ಭಾರತ ಸುಮ್ಮನಿರಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಎಚ್ಚರಿಕೆ ನೀಡಿದ್ದಾರೆ.
ಬೇರೆಯವರ ಮೇಲೆ ದಾಳಿ ಮಾಡಲ್ಲ, ಮಾಡಿದ್ರೆ ಈ ಜನ್ಮದಲ್ಲಿ ಮರೆಯಲಾಗದ ಏಟು ಕೊಡ್ತೇವಿ: ನಾಯ್ಡು ಗುಡುಗು
ಭಾರತ ಮೇಲೆ ಯಾರಾದರೂ ದಾಳಿ ಮಾಡಿದರೆ, ಭಾರತ ಅವರು ಜೀವಿತಾವಧಿಯವರೆಗೆ ನೆನಪಿಟ್ಟುಕೊಳ್ಳುವಂತೆ ತಕ್ಕ ಪ್ರತ್ಯುತ್ತರ ನೀಡುತ್ತದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ವಿಶಾಖಪಟ್ಟಣಂನಲ್ಲಿ ನಡೆದ ನೌಕಾ ವಿಜ್ಞಾನ ಮತ್ತು ತಾಂತ್ರಿಕ ಪ್ರಯೋಗಾಲಯದ ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ಮೊದಲು ಯಾರ ಮೇಲೂ ದಾಳಿ ಮಾಡುವುದಿಲ್ಲ. ಆದರೆ, ಯಾರಾದರೂ ದಾಳಿ ಮಾಡಿದರೆ ಅವರು ಜೀವಿತಾವಧಿಯವರೆಗೆ ನೆನಪಿಟ್ಟುಕೊಳ್ಳುವಂತೆ ಉತ್ತರ ನೀಡುತ್ತದೆ ಎಂದಿದ್ದಾರೆ.
ಅಲ್ಲದೆ ಕಾಶ್ಮೀರದ ವಿಷಯದಲ್ಲಿ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಸುವುದನ್ನು ನಾಯ್ಡು ತಳ್ಳಿಹಾಕಿದ್ದಾರೆ. ಆದರೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ವಿಚಾರದ ಕುರಿತು ನಮ್ಮ ನೆರೆಹೊರೆಯವರೊಂದಿಗೆ ಮಾತುಕತೆ ನಡೆಸಬಹುದು ಎಂದಿದ್ದಾರೆ.
Last Updated : Aug 28, 2019, 3:28 PM IST