ನವದೆಹಲಿ: ಪೂರ್ವ ಲಡಾಖ್ನಲ್ಲಿ ಭಾರತೀಯ ಸೈನಿಕರು ಅಪ್ರತಿಮ ಶೌರ್ಯದಿಂದ ಚೀನಾದ ಸೈನಿಕರನ್ನು ಎದುರಿಸುತ್ತಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಫ್ಐಸಿಸಿಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಭಾರತದ ಹಿಮಾಲಯದಲ್ಲಿನ ಅಪ್ರಚೋದಿತ ದಾಳಿ ಅಂತಾರಾಷ್ಟ್ರೀಯ ಒಪ್ಪಂದಗಳು ಎಷ್ಟರ ಮಟ್ಟಿಗೆ ಅಸ್ಥಿತ್ವದಲ್ಲಿವೆ?, ಜಗತ್ತು ಹೇಗೆ ಬದಲಾಗುತ್ತಿದೆ? ಎಂಬುದನ್ನು ಸೂಚಿಸುತ್ತದೆ ಎಂದು ರಾಜನಾಥ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮ್ಮ ದೇಶದ ಯೋಧರು, ಪೀಪಲ್ಸ್ನ ಲಿಬರೇಷನ್ ಆರ್ಮಿ (ಪಿಎಲ್ಎ) ಸೈನಿಕರ ವಿರುದ್ಧ ಶೌರ್ಯದಿಂದ ಹೋರಾಡಿ, ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಭಾರತದ ಮುಂದಿನ ತಲೆಮಾರುಗಳು ಈ ವಿಚಾರಕ್ಕೆ ಹೆಮ್ಮೆ ಪಡುತ್ತವೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.