ನವದೆಹಲಿ:ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ ತೆಗೆದುಕೊಂಡ ನಿರ್ಧಾರದ ವಿರುದ್ಧ ಆಧುನಿಕ ವೈದ್ಯಕೀಯ ಪದ್ಧತಿಯ ವೈದ್ಯರು ನಾಳೆ ದೇಶದ 10 ಸಾವಿರ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ತಿಳಿಸಿದೆ.
ಆಯುರ್ವೇದದಲ್ಲಿ ಸ್ನಾತಕೋತ್ತರ ವಿಭಾಗದಲ್ಲಿ ಸರ್ಜರಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಧುನಿಕ ವೈದ್ಯ ಪದ್ಧತಿಯನ್ನು ಕಲಿಸುವುದು ಹಾಗೂ ಶಸ್ತ್ರ ಚಿಕಿತ್ಸೆಯ ಪ್ರಕ್ರಿಯೆಗಳನ್ನು ಹೇಳಿಕೊಡುವುದಾಗಿ ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ ಹೇಳಿಕೊಂಡಿದ್ದು, ಇದಕ್ಕೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಆಕ್ಷೇಪ ವ್ಯಕ್ತಪಡಿಸಿದೆ.