ನವದೆಹಲಿ:ಭಾರತದಲ್ಲಿ ಕೇವಲ ಎರಡೇ ದಿನದಲ್ಲಿ ಲಕ್ಷಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಇದೀಗ ದೇಶದಲ್ಲಿ ಕೋವಿಡ್ ಕೇಸ್ಗಳ ಸಂಖ್ಯೆ 18 ಲಕ್ಷದ ಗಡಿ ದಾಡಿದೆ. ಇತ್ತ ಮೃತರ ಸಂಖ್ಯೆ 38 ಸಾವಿರ ತಲುಪಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,972 ಸೋಂಕಿತರು ಪತ್ತೆಯಾಗಿದ್ದು, 771 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 18,03,696ಕ್ಕೆ ಹಾಗೂ ಮೃತರ ಸಂಖ್ಯೆ 38,135ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 11,86,203 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 5,79,357 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ ಆಗಸ್ಟ್ 2ರ ವರೆಗೆ 2 ಕೋಟಿಗೂ ಅಧಿಕ ಜನರಿಗೆ (2,02,02,858) ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 3,81,027 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.