ನವದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 89,746 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೀಗ ಸೋಂಕು ಪತ್ತೆಯಾಗುತ್ತಿರುವ ಪ್ರಮಾಣಕ್ಕಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. 83,347 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಈವರೆಗೆ ಒಟ್ಟು 45,87,613 ಮಂದಿ ಮಹಾಮಾರಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಗುಣಮುಖರಾಗುತ್ತಿರುವವರ ಪ್ರಮಾಣ 81.25ಕ್ಕೆ ಏರಿಕೆಯಾಗಿರುವುದು ಜನರಲ್ಲಿ ಆಶಾಭಾವನೆ ಮೂಡಿಸಿದೆ.
ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗಿದ್ದು, ಪ್ರತಿನಿತ್ಯ 12 ಲಕ್ಷ ಮಂದಿಯನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ಈವರೆಗೆ ಒಟ್ಟು 6.5 ಕೋಟಿ ಪರೀಕ್ಷೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಹೆಚ್ಚು ಮಂದಿಯನ್ನು ತಪಾಸಣೆ ಮಾಡುತ್ತಿರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಕೂಡ ಪಾಸಿಟಿವ್ ಪ್ರಮಾಣ ಕಡಿಮೆಯಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ದೇಶದಲ್ಲಿ ಒಟ್ಟಾರೆಯಾಗಿ 55,62,664 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಅದರಲ್ಲಿ 9,75,861 ಆಕ್ವೀವ್ ಕೇಸ್‌ಗಳಿವೆ.