ನವದೆಹಲಿ:ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅರ್ಧ ಕೋಟಿ ಗಡಿಯತ್ತ ಸಾಗಿದ್ದರೆ, ಇತ್ತ ಸಾವಿನ ಸಂಖ್ಯೆ 80 ಸಾವಿರ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ 83,809 ಸೋಂಕಿತರು ಪತ್ತೆಯಾಗಿದ್ದು, 1,054 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 49,30,237 ಹಾಗೂ ಮೃತರ ಸಂಖ್ಯೆ 80,776ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 38,59,400 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 9,90,061 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್ ಸೆಪ್ಟೆಂಬರ್ 14ರವರೆಗೆ 5,83,12,273 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,72,845 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.