ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಕೊರೊನಾ​ ಗುಣಮುಖರ ಪ್ರಮಾಣ ಶೇ. 97.19ಕ್ಕೆ ಏರಿಕೆ.. 58 ಲಕ್ಷ ಮಂದಿಗೆ ಲಸಿಕೆ

ದೇಶದಲ್ಲಿ 1,05,34,505 ಮಂದಿ ಕೋವಿಡ್​ನಿಂದ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ. 97.19ಕ್ಕೆ ಏರಿಕೆಯಾಗಿದೆ.

Total number of corona cases and deaths in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

By

Published : Feb 8, 2021, 10:28 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,831 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 84 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,08,38,194 ಹಾಗೂ ಮೃತರ ಸಂಖ್ಯೆ 1,55,080ಕ್ಕೆ ಏರಿಕೆಯಾಗಿದೆ.

ಆದರೆ 1,05,34,505 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ. 97.19ಕ್ಕೆ ಏರಿಕೆಯಾಗಿದೆ. ಉಳಿದಂತೆ 1,48,609 ಕೇಸ್​​ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಕಾಶ್ಮೀರದ ಗುಲ್ಮಾರ್ಗ್​ನಲ್ಲಿ ನಡುಗಿದ ಭೂಮಿ.. 3.5 ತೀವ್ರತೆ ದಾಖಲು

ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 58,12,362 ಮಂದಿಗೆ ಲಸಿಕೆ ನೀಡಲಾಗಿದೆ.

ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಫೆಬ್ರವರಿ​ 7ರ ವರೆಗೆ 20 ಕೋಟಿಗೂ ಹೆಚ್ಚು ( 20,19,00,614) ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 5,32,236 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ABOUT THE AUTHOR

...view details