ಕರ್ನಾಟಕ

karnataka

ETV Bharat / bharat

ಭಾರತದ ಕೋವಿಡ್​ ಸಮರ: 58 ಲಕ್ಷ ಸೋಂಕಿತರು ಗುಣಮುಖ, 9 ಲಕ್ಷ ಕೇಸ್​ ಸಕ್ರಿಯ

ನಿನ್ನೆ ಒಂದೇ ದಿನ ದೇಶದಲ್ಲಿ 11,94,321 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ಇವರಲ್ಲಿ 78,524 ಮಂದಿಯ ವರದಿ ಪಾಸಿಟಿವ್​ ಬಂದಿದೆ.

India's COVID tally crosses 68-lakh mark
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

By

Published : Oct 8, 2020, 10:26 AM IST

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 68 ಲಕ್ಷ ಗಡಿ ದಾಟಿದ್ದರೂ, ಶೇ.84ಕ್ಕೂ ಹೆಚ್ಚು ಜನರು ಮಹಾಮಾರಿಯಿಂದ ಚೇತರಿಸಿಕೊಂಡಿದ್ದಾರೆ. ಹಾಗೆಯೇ ಹೊಸ ಸೋಂಕಿತರ ಸಂಖ್ಯೆಯಲ್ಲಿ ಕೂಡ ಇಳಿಮುಖವಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ 78,524 ಸೋಂಕಿತರು ಪತ್ತೆಯಾಗಿದ್ದು, 971 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 68,35,656 ಹಾಗೂ ಮೃತರ ಸಂಖ್ಯೆ 1,05,526ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 58,27,705 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 9,02,425 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಅಕ್ಟೋಬರ್ 7ರ ವರೆಗೆ 8,34,65,975 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,94,321 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ABOUT THE AUTHOR

...view details