ನವದೆಹಲಿ: ಭಾರತದಲ್ಲಿ ಕೋವಿಡ್ ಅಬ್ಬರ ಜೋರಾಗಿದ್ದು, ಒಂದೇ ದಿನ ಸುಮಾರು 67 ಸಾವಿರ ಮಂದಿಗೆ ಕೋವಿಡ್ ಅಂಟಿದೆ. ಸಾವಿನ ಸಂಖ್ಯೆ ಕೂಡ 47 ಸಾವಿರದ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 66,999 ಸೋಂಕಿತರು ಪತ್ತೆಯಾಗಿದ್ದು, 942 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 23,96,638(23.99 ಲಕ್ಷ)ಕ್ಕೆ ಹಾಗೂ ಮೃತರ ಸಂಖ್ಯೆ 47,033ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 16,95,982 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 6,53,622 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್ ಆಗಸ್ಟ್ 12ರ ವರೆಗೆ 2.68 ಕೋಟಿಗೂ (2,68,45,688) ಹೆಚ್ಚು ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,30,391 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.