ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈಗ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ ಅರ್ಧ ಕೋಟಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 90,123 ಪ್ರಕರಣಗಳು ಪತ್ತೆಯಾಗಿದ್ದು 1,290 ಮಂದಿ ಬಲಿಯಾಗಿದ್ದಾರೆ.
ದಿನವೊಂದಕ್ಕೆ ಸರಿಸುಮಾರು 80 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿದೆ. ಸದ್ಯಕ್ಕೆ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 50,20,360ಕ್ಕೆ ಏರಿಕೆಯಾಗಿದೆ. ಸದ್ಯ 9,95,933 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 39,42,361 ಜನರು ಕೋವಿಡ್ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.