ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಪ್ರಮಾಣ ಎಷ್ಟಿದೆ ಎಂದರೆ ಕೇವಲ ನಾಲ್ಕೇ ದಿನದಲ್ಲಿ ಲಕ್ಷ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದೀಗ ದೇಶದಲ್ಲಿ ಕೋವಿಡ್ ಕೇಸ್ಗಳ ಸಂಖ್ಯೆ 8 ಲಕ್ಷದ ಗಡಿ ದಾಟಿ ಮುನ್ನುಗ್ಗುತ್ತಿದೆ.
4 ದಿನದಲ್ಲಿ ಲಕ್ಷ ತಲುಪುತ್ತಿದೆ ಸೋಂಕಿತರ ಸಂಖ್ಯೆ: ಒಂದೇ ದಿನ 27 ಸಾವಿರ ಪ್ರಕರಣ ಪತ್ತೆ - ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,20,916ಕ್ಕೆ ಹೆಚ್ಚಳವಾಗಿದ್ದರೆ, ಮೃತರ ಸಂಖ್ಯೆ 22,123ಕ್ಕೆ ಏರಿಕೆಯಾಗಿದೆ.
![4 ದಿನದಲ್ಲಿ ಲಕ್ಷ ತಲುಪುತ್ತಿದೆ ಸೋಂಕಿತರ ಸಂಖ್ಯೆ: ಒಂದೇ ದಿನ 27 ಸಾವಿರ ಪ್ರಕರಣ ಪತ್ತೆ India's COVID19 case tally crosses 8 lakh mark](https://etvbharatimages.akamaized.net/etvbharat/prod-images/768-512-7979964-thumbnail-3x2-megha.jpg)
ಭಾರತದಲ್ಲಿ ಕೊರೊನಾ ಪ್ರಕರಣಗಳು
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 27,114 ಸೋಂಕಿತರು ಪತ್ತೆಯಾಗಿದ್ದು, 519 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 8,20,916ಕ್ಕೆ ಹಾಗೂ ಮೃತರ ಸಂಖ್ಯೆ 22,123ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ.62 ರಷ್ಟು ಅಂದರೆ 5,15,386 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 2,83,407 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.