ಕರ್ನಾಟಕ

karnataka

ETV Bharat / bharat

ಇದು ಒಳ್ಳೇ ಸುದ್ದಿ.. ದೇಶದಲ್ಲೀಗ ಸಕ್ರಿಯ ಕೊರೊನಾ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆಯೇ ಹೆಚ್ಚು!! - ಕೊರೊನಾ ಸುದ್ದಿ

ಸಕ್ರಿಯ ಪ್ರಕರಣಗಳ ಪ್ರಮಾಣಕ್ಕಿಂತ ಗುಣಮುಖರ ಪ್ರಮಾಣ ಹೆಚ್ಚಿರುವುದು ಜನತೆ ಕೊಂಚ ನಿರಾಳರಾಗುವಂತೆ ಮಾಡಿದೆ. ಆರೋಗ್ಯ ಇಲಾಖೆ ಪ್ರಕಾರ ಸದ್ಯ ದೇಶದಲ್ಲಿ ಕೊರೊನಾ ಗುಣಮುಖರ ಪ್ರಮಾಣ ಶೇ. 49% ರಷ್ಟಿದೆ.

Corona
ಕೊರೊನಾ

By

Published : Jun 10, 2020, 4:00 PM IST

ಹೈದರಾಬಾದ್ :ಕೊರೊನಾ ವೈರಸ್​ ವಿರುದ್ಧದ ಭಾರತದ ಹೋರಾಟಕ್ಕೆ ಯಶಸ್ಸು ಸಿಗುತ್ತಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಗುಣಮುಖರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ.

ದೇಶದಲ್ಲಿ ಇದೇ ಮೊದಲ ಬಾರಿ ಒಟ್ಟು ಸಕ್ರಿಯ ಪ್ರಕರಣಗಳಿಗಿಂತ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದವರ ಸಂಖ್ಯೆಯೇ ಹೆಚ್ಚಾಗಿದೆ. ಸದ್ಯ ದೇಶದಲ್ಲಿ ವರದಿಯಾದ ಒಟ್ಟು 2,76,583 ಕೋವಿಡ್​-19 ಪ್ರಕರಣಗಳಲ್ಲಿ ಈವರೆಗೆ 1,35,205 ಜನ ಗುಣಮುಖರಾಗಿದ್ದಾರೆ. ಸದ್ಯ 1,33,632 ಜನ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಡೆಯುತ್ತಿದೆ. ಉಳಿದಂತೆ 7,745 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣಕ್ಕಿಂತ ಗುಣಮುಖರ ಪ್ರಮಾಣ ಹೆಚ್ಚಿರುವುದು ಜನತೆ ಕೊಂಚ ನಿರಾಳರಾಗುವಂತೆ ಮಾಡಿದೆ. ಆರೋಗ್ಯ ಇಲಾಖೆ ಪ್ರಕಾರ ಸದ್ಯ ದೇಶದಲ್ಲಿ ಕೊರೊನಾ ಗುಣಮುಖರ ಪ್ರಮಾಣ ಶೇ. 49% ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,776‬ ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ನಿದರ್ಶನವಾಗಿದೆ.

ABOUT THE AUTHOR

...view details