ನವದೆಹಲಿ: ಕೊರೊನಾ ಸಾಂಕ್ರಾಮಿಕದ ನಡುವೆ 2020ರ ವಿಶ್ವಸಂಸ್ಥೆಯ ಮಾನವ ಅಭಿವೃದ್ಧಿ ಕಾರ್ಯಕ್ರಮದ (UNDP) ವರದಿ ಬಂದಿದೆ. ಭಾರತದ ಮಾನವ ಅಭಿವೃದ್ಧಿ ಸೂಚ್ಯಂಕ (HDI)ವು 129ನೇ ಸ್ಥಾನದಿಂದ 131ನೇ ಸ್ಥಾನಕ್ಕೆ ಕುಸಿದಿದೆ.
"ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ ಎಂದಲ್ಲ, ಆದರೆ ಇತರ ರಾಷ್ಟ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ" ಎಂದು ಹೇಳಿರುವ ಯುಎನ್‌ಡಿಪಿ ಅಧಿಕಾರಿಗಳು, ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಭಾರತದ ಬದ್ಧತೆಯನ್ನು ಶ್ಲಾಘಿಸಿದರು. ಅಲ್ಲದೇ ಈ ವಿಚಾರದಲ್ಲಿ ಭಾರತವು ಇತರ ದೇಶಗಳಿಗೂ ಸಹಾಯ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.