ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,383 ಹೊಸ ಪ್ರಕರಣಗಳು ದಾಖಲಾಗಿದ್ದು, 50 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 640ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 1,383 ಹೊಸ ಕೋವಿಡ್ ಪ್ರಕರಣ... 24 ಗಂಟೆಗಳಲ್ಲಿ 50 ಮಂದಿ ಸಾವು - ಕಳೆದ 24 ಗಂಟೆಗಳಲ್ಲಿ 1,383 ಹೊಸ ಪ್ರಕರಣಗಳು ದಾಖಲು
ಮುಂಜಾಗ್ರತಾ ಕ್ರಮಗಳ ಹೊರತಾಗಿಯೂ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,383 ಹೊಸ ಪ್ರರಣಗಳು ದಾಖಲಾಗಿ, 50 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 19,984ಕ್ಕೆ ಹೆಚ್ಚಿದೆ. 3,870 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 21ರ ವರೆಗೆ 4,62,621 ಜನರ ಮಾದರಿಗಳನ್ನು ಪರೀಕ್ಷೆ ಮಾಡಿರುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಗ್ರೀನ್ ಝೋನ್ ಹೊರತುಪಡಿಸಿ, ಹೆಚ್ಚು ಸೋಂಕಿತರು ಪತ್ತೆಯಾಗುತ್ತಿರುವ ಪ್ರದೇಶಗಳಲ್ಲಿ ಸರ್ಕಾರ ನಿರ್ಬಂಧಗಳನ್ನು ಮತ್ತಷ್ಟು ಕಠಿಣಗೊಳಿಸುವ ಸಾಧ್ಯತೆ ಇದೆ.
ಕೋವಿಡ್19 ಮಹಾಮಾರಿ ಮರಣ ಮೃದಂಗ ಬಾರಿಸುತ್ತಿರುವ ಅಮೆರಿಕಾದಲ್ಲಿ ಕಳೆದ 24 ಗಂಟೆಗಳಲ್ಲಿ 2700 ಜನ ಮೃತಪಟ್ಟಿದ್ದಾರೆ. ಅಲ್ಲಿ ಸಾವಿನ ಸಂಖ್ಯೆ 45,000 ಗಡಿ ದಾಟಿದೆ.