ನವದೆಹಲಿ:ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರುತ್ತಲೇ ಇವೆ. ಕಳೆದ 24 ಗಂಟೆಗಳಲ್ಲಿ 1076 ಹೊಸ ಪ್ರಕರಣಗಳು ದಾಖಲಾಗಿದ್ದು, 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ದೇಶದಲ್ಲಿ ಕೊರೊನಾ ತಲ್ಲಣ: 24 ಗಂಟೆಯಲ್ಲಿ 1076 ಹೊಸ ಪ್ರಕರಣ, 38 ಮಂದಿ ಸಾವು - ಕೋವಿಡ್-19
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 11,439ಕ್ಕೆ ಹಾಗೂ ಸಾವಿನ ಸಂಖ್ಯೆ 377ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
![ದೇಶದಲ್ಲಿ ಕೊರೊನಾ ತಲ್ಲಣ: 24 ಗಂಟೆಯಲ್ಲಿ 1076 ಹೊಸ ಪ್ರಕರಣ, 38 ಮಂದಿ ಸಾವು India's total number of Coronavirus positive cases](https://etvbharatimages.akamaized.net/etvbharat/prod-images/768-512-6796989-thumbnail-3x2-megha.jpg)
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದೇಶಾದ್ಯಂತ ಒಟ್ಟಾರೆಯಾಗಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 11,439ಕ್ಕೆ ಏರಿಕೆಯಾಗಿದೆ. ಇದರಲ್ಲಿ 9756 ಪ್ರಕರಣಗಳು ಆ್ಯಕ್ಟಿವ್ ಇದ್ದು, 1,306 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಮೃತರ ಸಂಖ್ಯೆ 377ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಮುಂಬೈನಲ್ಲಿ ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದ್ದ 10 ಮಂದಿ ಆಸ್ಪತ್ರೆ ಸಿಬ್ಬಂದಿಗೆ ಕೋವಿಡ್-19 ಇರುವುದು ಇಂದು ದೃಢಪಟ್ಟಿದೆ. ಇವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಈ ಆಸ್ಪತ್ರೆಯಲ್ಲಿ ಸೋಂಕು ತಗುಲಿದ ಸಿಬ್ಬಂದಿಯ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ ಆಸ್ಪತ್ರೆಯ ಹೆಸರನ್ನು ಬಹಿರಂಗಪಡಿಸಿಲ್ಲ.