ಬಾಲಸೋರ್ (ಒಡಿಶಾ):ಭಾರತೀಯ ತಂತ್ರಜ್ಞಾನದ ಮೂಲಕ ಅಭಿವೃದ್ಧಿಪಡಿಸಲಾದ ಅಣ್ವಸ್ತ್ರ ಸಾಮರ್ಥ್ಯದ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ - ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಪೃಥ್ವಿ- 2 ಕ್ಷಿಪಣಿ
ಭಾರತವು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಣ್ವಸ್ತ್ರ ಸಾಮರ್ಥ್ಯದ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.
ಪೃಥ್ವಿ- 2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಅತ್ಯಾಧುನಿಕ ಕ್ಷಿಪಣಿಯನ್ನು ಇಲ್ಲಿಗೆ ಸಮೀಪವಿರುವ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್)ನಿಂದ ರಾತ್ರಿ ಪರೀಕ್ಷಿಸಲಾಯಿತು. ಪ್ರಯೋಗ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
350 ಕಿ.ಮೀ. ದೂರಕ್ಕೆ ಜಿಗಿಯುವ ಸಾಮರ್ಥ್ಯ ಹೊಂದಿರುವ ಪೃಥ್ವಿ-2 ಕ್ಷಿಪಣಿಯನ್ನು ಮೊಬೈಲ್ ಲಾಂಚರ್‌ನಿಂದ ಐಟಿಆರ್‌ನ ಉಡಾವಣಾ ಸಂಕೀರ್ಣ-3ರಿಂದ ಪರೀಕ್ಷೆ ನಡೆಸಲಾಗಿದೆ ಎಂದು ಡಿಆರ್‌ಡಿಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ಕೂಡ ಇದರ ಪ್ರಯೋಗ ನಡೆಸಲಾಗಿತ್ತು. ಈ ಕ್ಷಿಪಣಿ 500ರಿಂದ 1,000 ಕೆಜಿ ಸಾಮರ್ಥ್ಯದ ಸಿಡಿತಲೆಗಳನ್ನು ಹೊತ್ತು ಸಾಗಬಲ್ಲದು.