ನವದೆಹಲಿ:ಒಂದು ಬಾರಿಗೆ ಲಾಕ್ಡೌನ್ ತೆರವಾಗಿ ವಿಮಾನಗಳ ಹಾರಾಟಕ್ಕೆ ಅವಕಾಶ ನೀಡಿದ್ರೆ ಹಲವಾರು ಮುಂಜಾಗ್ರತಾ ಕ್ರಮಗಳೊಂದಿಗೆ ನಮ್ಮ ವಿಮಾನಯಾನ ಸೇವೆ ಆರಂಭವಾಗಲಿದೆ ಎಂದು ಇಂಡಿಗೋ ಏರ್ಲೈನ್ಸ್ನ ಸಿಇಓ ರೊನೊಜಾಯ್ ದತ್ತಾ ಹೇಳಿದ್ದಾರೆ.
ಮಂಗಳವಾರ ಈ ಬಗ್ಗೆ ಮಾತನಾಡಿರುವ ಅವರು ವಿಮಾನಗಳಲ್ಲಿ ಕೆಲಕಾಲ ಊಟ ಕೊಡುವುದನ್ನು ನಿಲ್ಲಿಸಲಾಗುತ್ತದೆ. ವಿಮಾನದ ಶೇ 50ರಷ್ಟು ಆಸನಗಳನ್ನು ಮಾತ್ರ ಬಳಸಿಕೊಳ್ಳಲಾಗುತ್ತದೆ ಎಂದಿರುವ ಅವರು ಇಂತಹ ಕ್ಲಿಷ್ಟಕರದ ಪರಿಸ್ಥಿತಿಯಲ್ಲಿ ಎಲ್ಲಾ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.