ಕರ್ನಾಟಕ

karnataka

ETV Bharat / bharat

ದೇವನಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್​ ಆರಂಭ: ಮೊಯ್ಲಿಯಿಂದ ಉದ್ಘಾಟನೆ - ದೇವನಹಳ್ಳಿ

ಇಂದಿರಾ ಕ್ಯಾಂಟೀನ್ ಸಾರ್ವಜನಿಕರಿಗೆ, ಬಡವರಿಗೆ ತುಂಬಾ ಅನುಕೂಲವಾಗಲಿದೆ. ಇದೇ ರೀತಿ ಇಂದಿರಾ ಕ್ಯಾಂಟೀನ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಥಾಪನೆ‌ ಮಾಡಲಾಗುತ್ತದೆ. ಇದರಿಂದ ಅಲ್ಲಿನ ಟ್ಯಾಕ್ಸಿ ಚಾಲಕರಿಗೆ ಕಡಿಮೆ ಹಣದಲ್ಲಿ ಹೊಟ್ಟೆ ತುಂಬ ಊಟ ಸಿಗಲಿದೆ ಎಂದು ವೀರಪ್ಪ ಮೊಯ್ಲಿ ಹೇಳಿದರು.

ಇಂದಿರಾ ಕ್ಯಾಂಟೀನ್ ಆರಂಭ

By

Published : Feb 9, 2019, 2:04 PM IST

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸಂಸದ ವೀರಪ್ಪ ಮೊಯ್ಲಿ, ಸಚಿವ ಕೃಷ್ಣಬೈರೇಗೌಡ ಮತ್ತು ಶಾಸಕ ನಿಸರ್ಗ ನಾರಾಯಣಸ್ವಾಮಿ ನೂತನವಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದರು.

ಉದ್ಘಾಟನೆ ಬಳಿಕ ಸಚಿವ ಕೃಷ್ಣಬೈರೇಗೌಡ, ಸಂಸದ ವೀರಪ್ಪ ಮೊಯ್ಲಿ, ಶಾಸಕ ನಿಸರ್ಗ ನಾರಾಯಣಸ್ವಾಮಿ ಸೇರಿದಂತೆ ಪುರಸಭೆ ಅಧಿಕಾರಿಗಳು ಇಂದಿರಾ ಕ್ಯಾಂಟೀನ್​ನಲ್ಲಿ ತಯಾರಾದ ಕೇಸರಿ ಬಾತ್ ಮತ್ತು ಉಪ್ಪಿಟ್ಟನ್ನು ಬಡಿಸಿದರು. ಬಳಿಕ ತಾವೂ ಕೂಡ‌ ಕ್ಯಾಂಟೀನ್​ನಲ್ಲಿ ತಯಾರಾದ ಆಹಾರವನ್ನು ಸೇವಿಸಿದರು.

ಈ ವೇಳೆ ಮಾತವಾಡಿದ ಸಂಸದ ವೀರಪ್ಪ‌ ಮೊಯ್ಲಿ, ಇಂದಿರಾ ಕ್ಯಾಂಟೀನ್ ಸಾರ್ವಜನಿಕರಿಗೆ, ಬಡವರಿಗೆ ತುಂಬಾ ಅನುಕೂಲವಾಗಲಿದೆ. ಇದೇ ರೀತಿ ಇಂದಿರಾ ಕ್ಯಾಂಟೀನ್ಅ​ನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಥಾಪನೆ‌ ಮಾಡಲಾಗುತ್ತದೆ. ಇದರಿಂದ ಅಲ್ಲಿನ ಟ್ಯಾಕ್ಸಿ ಚಾಲಕರಿಗೆ ಕಡಿಮೆ ಹಣದಲ್ಲಿ ಹೊಟ್ಟೆ ತುಂಬ ಊಟ ಸಿಗಲಿದೆ ಎಂದರು.

ಇನ್ನು ದಿನನಿತ್ಯ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ರೈತರು ಹೋಟೆಲ್​ಗಳಿಗೆ ಹೋಗಿ 50-100 ರೂ. ಕೊಟ್ಟು ಊಟ ಮಾಡಬೇಕಾಗಿತ್ತು. ಇದೀಗ ಇಂದಿರಾ ಕ್ಯಾಂಟೀನ್​ನಲ್ಲಿ ಕಡಿಮೆ ಬೆಲೆಗೆ ಹೊಟ್ಟೆ ತುಂಬ ಊಟ ಸಿಗುವುದರಿಂದ ಸಾರ್ವಜನಿಕರಿಗೆ ತುಂಬಾ ಖುಷಿಯಾಗಿದೆ ಎಂದರು.

ABOUT THE AUTHOR

...view details