ಮಲಪುರಂ: ಕೇರಳದ ಕೋಯಿಕ್ಕೋಡ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಯಾಣಿಕನೊಬ್ಬ ಇಂದು ಮೃತಪಟ್ಟಿದ್ದಾರೆ.
ಕೋಯಿಕ್ಕೋಡ್ ವಿಮಾನ ದುರಂತದಲ್ಲಿ ಗಾಯಗೊಂಡಿದ್ದ ಪ್ರಯಾಣಿಕ ಸಾವು - kozhikode airport
ಕೋಯಿಕ್ಕೋಡ್ ವಿಮಾನ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಯಾಣಿಕರೊಬ್ಬರು ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತನನ್ನು ಮಲಪುರಂನ ತಿರುವಲ್ಲಿ ಮೂಲದ ಅರವಿಂದಕ್ಷನ್ (68) ಎಂದು ಗುರುತಿಸಲಾಗಿದೆ. ವಿಮಾನ ಅಪಘಾತದಲ್ಲಿ ಅರವಿಂದಕ್ಷನ್ ಅವರ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಆಗಸ್ಟ್ 7 ರಂದು ವಂದೇ ಭಾರತ್ ಮಿಷನ್ ಅಡಿ ದುಬೈನಿಂದ ಕೇರಳಕ್ಕೆ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಕೋಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್ವೇನಲ್ಲಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿದಂತೆ 19 ಮಂದಿ ಮೃತಪಟ್ಟಿದ್ದು, ನೂರಾರು ಪ್ರಯಾಣಿಕರು ಗಾಯಗೊಂಡಿದ್ದರು.