ಹೈದರಾಬಾದ್:ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ನನ್ನು ಅವರ ಸಹಚರರೊಂದಿಗೆ ಬಂಧಿಸಲಾಗಿದೆ.
ಲಂಚ ಪ್ರಕರಣ: ಸರ್ಕಲ್ ಇನ್ಸ್‌ಪೆಕ್ಟರ್ ಬಂಧನ - ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಬಂಧನ
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ನನ್ನು ಬಂಧಿಸಲಾಗಿದ್ದು, ತನ್ನ ಸಹಚರನ ಮೂಲಕ 5 ಲಕ್ಷ ರೂಪಾಯಿ ಲಂಚ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
![ಲಂಚ ಪ್ರಕರಣ: ಸರ್ಕಲ್ ಇನ್ಸ್‌ಪೆಕ್ಟರ್ ಬಂಧನ ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಬಂಧನ](https://etvbharatimages.akamaized.net/etvbharat/prod-images/768-512-9612962-406-9612962-1605935463312.jpg)
ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಬಂಧನ
ದೂರುದಾರರ ಬಳಿ ಇನ್ಸ್‌ಪೆಕ್ಟರ್ ಜಗದೀಶ್ ತಮ್ಮ ಸಹಚರ ಎಂ.ಸುಜಯ್ ಮೂಲಕ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದರಂತೆ. ಬಂಧನದ ನಂತರ ಜಗದೀಶ್ ಮತ್ತು ಸುಜಯ್ ಅವರನ್ನು ಕರೀಂನಗರ ವಿಶೇಷ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.