ಕರ್ನಾಟಕ

karnataka

ETV Bharat / bharat

ಆಗಸ್ಟ್​​ 5ರಂದು ಅಯೋಧ್ಯೆಯಲ್ಲಿ ಭಯೋತ್ಪಾದಕ ದಾಳಿ ಸಾಧ್ಯತೆ: ಗುಪ್ತಚರ ಇಲಾಖೆ - ಪಾಕ್​ ಉಗ್ರ ಸಂಘಟನೆ

ಅಯೋಧ್ಯೆಯಲ್ಲಿ ಆಗಸ್ಟ್​ 5ರಂದು ನಡೆಯಲಿರುವ ಶ್ರೀರಾಮ ಮಂದಿರ ಭೂಮಿ ಪೂಜಾ ಕಾರ್ಯಕ್ರಮದ ವೇಳೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.

terror attack in ayodhya
terror attack in ayodhya

By

Published : Jul 28, 2020, 7:05 PM IST

ನವದೆಹಲಿ:ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಆಗಸ್ಟ್​ 5ರಂದು ಶ್ರೀ ರಾಮ ಮಂದಿರ ಭೂಮಿ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ಉಗ್ರರ ಸಂಭಾವ್ಯ ದಾಳಿಯ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಜೈಶ್​-ಎ-ಮೊಹಮ್ಮದ್​ ಮತ್ತು ಲಷ್ಕರ್​-ಎ-ತೈಬಾ ಸಂಘಟನೆಯ ಭಯೋತ್ಪಾದಕರು ದಾಳಿ ನಡೆಸಬಹುದು ಎಂದು ಭಾರತೀಯ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗ (RAW) ಮಾಹಿತಿ ನೀಡಿದೆ.

ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್‌ಐ) ರಾಮ ಜನ್ಮಭೂಮಿ ಅಥವಾ ಅದರ ಸುತ್ತಲಿನ ಪ್ರದೇಶದಲ್ಲಿ ದೊಡ್ಡ ಮಟ್ಟದ ದಾಳಿ ನಡೆಸಲು ಸಂಚು​ ರೂಪಿಸಿಕೊಳ್ಳುತ್ತಿದೆ. ಅಫ್ಘಾನಿಸ್ತಾನದ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ಭಯೋತ್ಪಾದಕರಿಗೆ ಐಎಸ್ಐ ಈ ನಿಟ್ಟಿನಲ್ಲಿ ವಿಶೇಷ ತರಬೇತಿ ನೀಡಿದ್ದು, ಐಎಸ್ಐ ಮೂರರಿಂದ ನಾಲ್ವರು ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸಿದೆ ಎಂದು ತಿಳಿಸಿದೆ. ಆಗಸ್ಟ್​ 15ರ ಸ್ವಾತಂತ್ರ್ಯ ದಿನದಂದು ಉಗ್ರರು ದಾಳಿ ನಡೆಸುವ ಸಾಧ್ಯತೆಯನ್ನೂ ಗುಪ್ತಚರ ವಿಭಾಗ ತಿಳಿಸಿದೆ.

ಮೂಲಗಳ ಪ್ರಕಾರ, ಅಯೋಧ್ಯೆ, ದೆಹಲಿ ಮತ್ತು ಕಾಶ್ಮೀರದಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾ ಇಡಲು ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಜುಲೈ 26ರಂದು ಜಮ್ಮು-ಕಾಶ್ಮೀರದ ಶೋಫಿಯಾನ್​ದಲ್ಲಿ ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದ ಯೋಧರು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದರು.

ಆಗಸ್ಟ್​ 5ರಂದು ಪ್ರಧಾನಿ ಮೋದಿ ಅಯೋಧ್ಯೆಗೆ ಭೇಟಿ ನೀಡಲಿದ್ದು, ಭೂಮಿ ಪೂಜೆ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ವಿಶೇಷವೆಂದರೆ, ಆಗಸ್ಟ್​ 5ರಂದು ಜಮ್ಮುಕಾಶ್ಮೀರಕ್ಕೆ ನೀಡಿದ ವಿಶೇಷ ಸಾಂವಿಧಾನಿಕ ಪ್ರಾತಿನಿಧ್ಯ ರದ್ದುಗೊಳಿಸಿ ಒಂದು ವರ್ಷ ಪೂರ್ಣಗೊಳ್ಳಲಿದೆ.

ABOUT THE AUTHOR

...view details