ಕರ್ನಾಟಕ

karnataka

ETV Bharat / bharat

ವಾರಣಾಸಿಯ ಕೋವಿಡ್ ವ್ಯಾಕ್ಸಿನೇಷನ್‌ ಫಲಾನುಭವಿಗಳೊಂದಿಗೆ ಮೋದಿ ವಿಡಿಯೋ ಸಂವಾದ - ವ್ಯಾಕ್ಸಿನೇಷನ್‌ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿರುವ ಮೋದಿ

ಜ.16ರಿಂದ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಕೊರೊನಾ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ್ದು, ಅಂದಿನಿಂದ ಲಸಿಕೆ ಹಾಕುವ ಕಾರ್ಯ ನಡೆಯುತ್ತಿದೆ. ಇಂದು ಮೋದಿಯವರು ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿ ಅವರ ಅನುಭವ ಕುರಿತು ಮಾಹಿತಿ ಪಡೆಯಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
Narendra modi

By

Published : Jan 22, 2021, 11:17 AM IST

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ಫಲಾನುಭವಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಂವಾದ ನಡೆಸಲಿದ್ದಾರೆ. ಈ ಕುರಿತಂತೆ ಸ್ವತಃ ಪಿಎಂ ಅವರೇ ಟ್ವೀಟ್​ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಕೊರೊನಾ ನಿಯಂತ್ರಣ ಮಾಡುವಲ್ಲಿ ಬಿಜೆಪಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ದೇಶದಾದ್ಯಂತ ಕೋವಿಡ್​ ಲಸಿಕೆ ಹಾಕುವ ಅಭಿಯಾನವನ್ನು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ಫಲಾನುಭವಿಗಳು ಮತ್ತು ವ್ಯಾಕ್ಸಿನೇಟರ್‌ಗಳೊಂದಿಗೆ ಇಂದು ಮಧ್ಯಾಹ್ನ 1: 15ಕ್ಕೆ ವಿಡಿಯೋ ಸಂವಾದ ನಡೆಸಲಿದ್ದು, ಅವರ ಅನುಭವದ ಕುರಿತು ಮಾಹಿತಿ ಪಡೆಯಲಿದ್ದಾರೆ. ಈ ಸಂಬಂಧ ಪಿಎಂ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಆರು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ :

ಈ ಸಂಬಂಧ ಸಿಎಂಒ ಡಾ.ವಿ.ಬಿ ಸಿಂಗ್ ಅವರು ಮಾಹಿತಿ ನೀಡಿದ್ದು, ವಾರಣಾಸಿ ಜಿಲ್ಲೆಯ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಹನ ನಡೆಸಲಿದ್ದಾರೆ. ಮಹಿಳಾ ಆಸ್ಪತ್ರೆ, ಜಿಲ್ಲಾಸ್ಪತ್ರೆ, ಸಿಎಚ್‌ಸಿ ಆನೆ ಮಾರುಕಟ್ಟೆಯಲ್ಲಿರುವ ನೌಕರರೊಂದಿಗೆ ಈ ಸಂವಾದ ನಡೆಯಲಿದೆ. ದಾದಿ, ವೈದ್ಯರು, ಇಬ್ಬರು ಎಎನ್‌ಎಂಗಳು, ಸ್ಕ್ಯಾವೆಂಜರ್, ಎಲ್‌ಟಿ ಸಂವಾದದಲ್ಲಿ ಭಾಗವಹಿಸಲಿದ್ದಾರೆ ಎಂದರು.

15 ಕೇಂದ್ರಗಳಲ್ಲಿ ಲಸಿಕೆ ನೀಡಿಕೆ:

ಜಿಲ್ಲೆಯ ಸುಮಾರು 15 ಕೇಂದ್ರಗಳಲ್ಲಿ ಇಂದು ಎರಡು ಸೆಷನ್‌ಗಳಲ್ಲಿ ಕೋವಿಡ್​ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಸುಮಾರು 3,000 ಜನರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ. ಈ ಸಂಬಂಧ ಗುರುವಾರವೇ ಎಲ್ಲ ಕೇಂದ್ರಗಳಿಗೆ ವ್ಯಾಕ್ಸಿನೇಷನ್​ ಅನ್ನು ತಲುಪಿಸಲಾಗಿದೆ.

ಜ.16 ರಿಂದ ಆರಂಭವಾದ ಅಭಿಯಾನ:

ಜ. 16 ರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಲಸಿಕೆ ಹಾಕುವ ಕಾರ್ಯ ನಡೆಯುತ್ತಿದೆ. ಮೊದಲಿಗೆ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ಎರಡನೇ ಹಂತದಲ್ಲಿ ರಾಜಕೀಯ ನಾಯಕರಿಗೆ ಲಸಿಕೆ ಹಾಕತ್ತದೆ.

ABOUT THE AUTHOR

...view details